*ಮಹಿಳಾ ಉದ್ಯಮಿಗಳ ಸಾಧನೆಗೆ ಗೌರವ; ನ. 20ರಂದು BCCI ಕಾರ್ಯಕ್ರಮ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಅಂತರರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದ ಅಂಗವಾಗಿ ಬೆಳಗಾವಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ (BCCI) ವತಿಯಿಂದ ಮಹಿಳಾ ಉದ್ಯಮಿಗಳ ಸಾಧನೆ ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ನವೆಂಬರ್ 20ರಂದು ಆಯೋಜಿಸಲಾಗಿದೆ.
ಉದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಉದ್ದೇಶದಿಂದ International Women Entrepreneurship Day and Recognition of Outstanding Women Entrepreneurs ಕಾರ್ಯಕ್ರಮವನ್ನು ಶುಕ್ರವಾರ ಸಂಜೆ 4.45ಕ್ಕೆ ಉದ್ಯಂಬಾಗದ ಪೈ ಕನ್ವೆನ್ಷನ್ ಹಾಲ್‌ನಲ್ಲಿ (ಹ್ಯುಂಡೈ ಶೋರೂಂ ಹಿಂಭಾಗ) ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಿಟಿಯು ಉಪಕುಲಪತಿ ವಿದ್ಯಾಶಂಕರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಹಿಳಾ ಉದ್ಯಮಿಗಳು, BCCI ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಮುಖ್ಯಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. BCCI ಅಧ್ಯಕ್ಷ ಸ್ವಪ್ನಿಲ್ ಶಾ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜ್ಯೋತ್ಸ್ನಾ ಪೈ ಹಾಗೂ ಅನಿತಾ ಕಣಬರ್ಗಿ ಕಾರ್ಯಕ್ರಮದ ಸಂಘಟನಾ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಮಹಿಳೆಯರ ಉದ್ಯಮಶೀಲತೆ, ಸಾಧನೆ, ಸ್ವಾವಲಂಬನೆ ಹಾಗೂ ಉದ್ಯಮ ಕ್ಷೇತ್ರದಲ್ಲಿ ಅವರ ಕೊಡುಗೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಮುಖ್ಯ ಆಶಯವಾಗಿದೆ.******************************





