ಪ್ರಕೃತಿ ಬೆಳಗಾವಿ

*ಅಮಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನೂತನ ಸದಸ್ಯರ ಅವಿರೋಧ ಆಯ್ಕೆ*

ಪ್ರಕೃತಿ ಬೆಳಗಾವಿ ಸುದ್ದಿ : ಖಾನಾಪುರ : ತಾಲೂಕಿನ ಅಮಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿ ಸದಸ್ಯರು, ಲಕ್ಷ್ಮಣ ಕಸರ್ಲೆಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಭೇಟಿಯಾಗಿ, ಆಯ್ಕೆಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಿದರು.

ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಅಭಿನಂದಿಸಿದ ಚನ್ನರಾಜ ಹಟ್ಟಿಹೊಳಿ ಅವರು, ಎಲ್ಲರಿಗೂ ಶುಭ ಹಾರೈಸಿ, ಸಂಘದ ಅಭಿವೃದ್ಧಿ ಹಾಗೂ ರೈತರ ಹಿತಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಹಾರೈಸಿದರು.********************************

Leave a Reply

Your email address will not be published. Required fields are marked *

Back to top button