ಪ್ರಕೃತಿ ಬೆಳಗಾವಿ
*ಮಟಕಾ ಆಡುತ್ತಿದ್ದ 65 ವರ್ಷದ ವ್ಯಕ್ತಿ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕರಡಿಗುದ್ದಿ ಗ್ರಾಮದ ಬಸ್ ನಿಲ್ದಾಣದ ಬಳಿ ಮಟಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಮಾರಿಹಾಳ ಪೊಲೀಸರು ಬಂಧಿಸಿದ್ದಾರೆ.
ನ.26ರಂದು ಎಎಸ್ಐ ಆರ್.ಎಂ. ತಳವಾರ ನೇತೃತ್ವದ ತಂಡ ದಾಳಿ ನಡೆಸಿ, ಕರಡಿಗುದ್ದಿಯ ನಿಂಗಪ್ಪ ಗಂಗಪ್ಪ ಎಮ್ಮಿಕಾರ (65) ಎಂಬಾತನನ್ನು ವಶಕ್ಕೆ ಪಡೆದಿದೆ.
ಆರೋಪಿತನಿಂದ 1,850 ರು.ನಗದು ಹಾಗೂ ಮಟಕಾ ಓಸಿ ಚೀಟಿಗಳನ್ನು ಜಪ್ತಿ ಮಾಡಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.**************************






