ರೋಡ್ ಶೋ ನಲ್ಲಿ ಶಾಸಕ ಲಕ್ಷ್ಮಣ ಸವದಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಯಿಂದ ಮತಯಾಚನೆ…!!
ಅಥಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಭರ್ಜರಿ ರೋಡ್ ಶೋ…
ಪ್ರಕೃತಿ ಬೆಳಗಾವಿ ಸುದ್ದಿ : ಅಥಣಿ : ಅಥಣಿ ನಗರದಲ್ಲಿ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಭರ್ಜರಿ ರೋಡ್ ಶೋ ನಡೆಸಿದರು.
ಶಾಸಕ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಜರುಗಿದ ಬೃಹತ್ ರ್ಯಾಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಕೈ ಮುಗಿದು ಮತಯಾಚಿಸಿದರು.
ರೋಡ್ ಶೋ ನಡೆಸುವ ಮುಂಚೆ ಶ್ರೀ ಸಿದ್ದೇಶ್ವರ ದೇವಸ್ಥಾನ, ಗಚ್ಚಿನ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಗರದಲ್ಲಿನ ಶ್ರೀ ಬಸವೇಶ್ವರ ಹಾಗೂ ಸಂಗೋಳ್ಳಿ ರಾಯಣ್ಣ ಮೂರ್ತಿಗಳಿಗೂ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ದಿಗ್ವಿಜಯ ಪವಾರ್ ದೇಸಾಯಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ, ರಮೇಶ ಸಿಂದಗಿ, ಸದಾಶಿವ ಬೂಟಾಳೆ ಸೇರಿದಂತೆ ನೂರಾರೂ ಕಾಂಗ್ರೆಸ್ ಕಾರ್ಯಕರ್ತರು, ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.******************************






