ಪ್ರಕೃತಿ ಬೆಳಗಾವಿ

ತಮ್ಮ ಹುಟ್ಟೂರಿನಲ್ಲಿ ಮತ ಚಲಾಯಿಸಿದ, ಸಾಮಾಜಿಕ ಹೋರಾಟಗಾರ ಪ್ರವೀಣ್ ಆರ್ ಮಾದರ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಲೋಕಸಭಾ ಚುನಾವಣೆ 2024 ಗುರುವಾರ ದಿನದಂದು ಖಾನಾಪುರ ತಾಲೂಕಿನ ಪ್ರಭುನಗರದಲ್ಲಿ ತಮ್ಮ ಹುಟ್ಟೂರಿನಲ್ಲಿ ಯುವ ಕರ್ನಾಟಕ ಭೀಮ್ ಸೇನೆ ಯುವಶಕ್ತಿ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರವೀಣ್ ಆರ್ ಮಾದರ್ ಮತ ಹಾಕಿದರು. ಆದನಂತರ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು ಮತ್ತು ಕರ್ತವ್ಯ

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ನಡೆಯಲಿರುವ 2ನೇ ಹಂತದ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಿ. ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ. ನಿಮ್ಮ ಒಂದು ಮತ ದೇಶದ ಭವಿಷ್ಯ ನಿರ್ಧರಿಸಲಿದೆ. ನಿಮಗಾಗಿ, ನಿಮ್ಮವರ ಭವಿಷ್ಯಕ್ಕಾಗಿ ಮತ್ತು ಭವ್ಯ ಭಾರತಕ್ಕಾಗಿ ಮತದಾನ ಮಾಡಿ.

ಪ್ರಜಾಪ್ರಭುತ್ವ ಹಬ್ಬದ ಶುಭಾಶಯಗಳು..

ಲೋಕಸಭಾ ಚುನಾವಣೆಯ ಮತದಾನದ ಅಂಗವಾಗಿ ಕುಟುಂಬದ ಸದಸ್ಯರೊಂದಿಗೆ ಮತಗಟ್ಟೆಗೆ ತೆರಳಿ, ಮತ ಚಲಾಯಿಸಿದೆ. ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಮಾದ್ಯಮ ಮುಂದೆ ಮಾತನಾಡಿದ್ದರು.*****************************

Back to top button