ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನಿಂದ ಸಂಭ್ರಮಿಸಿದ ಕಾರ್ಯಕರ್ತರು…!!
ಚಿಕ್ಕೋಡಿ ಮತಕ್ಷೇತ್ರದ ಎಂಪಿ ಗೆಲುವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ತಂದಿದೆ: ಪುಟ್ಟುಗೌಡ ನಾಯಿಕ…
ಪ್ರಕೃತಿ ಬೆಳಗಾವಿ ಸುದ್ದಿ : ರಾಯಬಾಗ : ಚಿಕ್ಕೋಡಿ ಲೋಕಸಭಾ ಚುನಾವಣೆ ಫಲಿತಾಂಶವು ಬಿಜೆಪಿ ಭದ್ರಕೋಟೆ ಆಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಚುನಾವಣೆಯ ಪ್ರಾರಂಭದಿಂದಲೂ ಎರಡು ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ತುರುಸಾ- ತುರುಸಿನ ಪ್ರಚಾರದಲ್ಲಿ ತೊಡಗಿದ್ದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಿಯಾಂಕಾ ಜಾರಕಿಹೊಳಿಯ ಅವರು ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಂತೆ ಕ್ಷೇತ್ರದಲ್ಲಿ ಮಿಂಚಿನ ಸಂಚಲನ ಉಂಟು ಮಾಡಿತ್ತು. ಜಿಲ್ಲಾ ಉಸ್ತುವಾರಿ ಮಂತ್ರಿ ಕಾಂಗ್ರೆಸ್ ಪಕ್ಷದ “ಮಾಸ್ಟರ್ ಮೈಂಡ್” ಸಚಿವ ಸತೀಶ ಜಾರಕಿಹೊಳಿ ಅವರ ಪ್ರಭಾವದಿಂದ ಕಾಂಗ್ರೇಸ್ ಕ್ಷೇತ್ರದ ಎಲ್ಲ ಹಾಲಿ ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರ ಸತತ ಪರಿಶ್ರಮದಿಂದ, ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟ ಪ್ರೀತಿ ವಿಶ್ವಾಸದಿಂದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿರವರು ಪ್ರಚಂಡ ಗೆಲುವನ್ನು ಪಡೆದುಕೊಂಡರು ಎಂದು ಗ್ರಾಪಂ ಸದಸ್ಯ ಪುಟ್ಟುಗೌಡ ನಾಯಿಕ ಹೇಳಿದರು.
ಅವರು ಕುಡುಚಿ ಮತಕ್ಷೇತ್ರದ ಕಪ್ಪಲಗುದ್ದಿ ಗ್ರಾಮದಲ್ಲಿ ಚಿಕ್ಕೋಡಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಯವರ ಗೆಲುವು ಪಡೆಯುತ್ತಿದ್ದಂತೆ ಕಪ್ಪಲಗುದ್ದಿ ಗ್ರಾಮದಲ್ಲಿ ಗುಲಾಲ ಎರಚುತ್ತ, ಪಟಾಕಿ ಸಿಡಿಸಿ ಸಂಭ್ರಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.******************************






