ಪ್ರಕೃತಿ ಬೆಳಗಾವಿ
ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ನಿಧನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸಂತಾಪ…!!
ಪ್ರಕೃತಿ ಬೆಳಗಾವಿ ಸುದ್ದಿ : ಹುಬ್ಬಳ್ಳಿ ಜೂ.27: ಬೆಳಗಾವಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು ಹಾಗೂ ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಮತ್ತು ದಕ್ಷಿಣ ಭಾರತದ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ್ ಶೆಟ್ಟರ್ ಸಂತಾಪ ಸೂಚಿಸಿದ್ದಾರೆ.
ಸಹಕಾರಿ ಕ್ಷೇತ್ರಕ್ಕೆ ಅವರ ಕೊಡುಗೆ ಅನನ್ಯ. ಮೃತರ ಕುಟುಂಬ, ಸಂಬಂಧಿಕರು, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಜಗದೀಶ್ ಶೆಟ್ಟರ್ ಅವರು ಪ್ರಾರ್ಥಿಸಿದ್ದಾರೆ.*********************






