ನೊಂದ ಕುಟುಂಬಕ್ಕೆ ಧೈರ್ಯ ತುಂಬಿ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಲು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಆಪ್ತ ಸಹಾಕರಾದ ಶ್ರೀ ಮಲ್ಲಗೌಡಾ ಪಾಟೀಲ್ ಖಡಕ ಎಚ್ಚರಿಕೆ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ತಾಲೂಕಿನ ಕಡೋಲಿ ಗ್ರಾಮದಲ್ಲಿ ಅಪ್ರಾಪ್ತೆ ಬುದ್ಧಿಮಾಂದ್ಯ ಯುವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನ ಮಾಡಲಾಗಿದೆ, ಈಡಿ ಗ್ರಾಮವೇ ಪ್ರಕ್ಷ್ಯುಬ್ಧ ವಾತಾರಣ ನಿರ್ಮಾಣವಾಗಿತ್ತು ತಕ್ಷಣವೇ ಬೆಳಗಾವಿ ಡಿಸಿಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಕಡೋಲಿ ಗ್ರಾಮದ ಆಜಾದ್ ಗಲ್ಲಿಯ ಸಮೀರ್ ಅಬ್ಬಾಸ್ ಧಾಮನೆಕರ್ ( 30) ಕಾಮುಕನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಯುವತಿಯ ಮನೆಯವರು ಅದೇ ಓಣಿಯಲ್ಲಿರುವ ಕಾಮುಕ ಸಮೀರನ ಮನೆಗೆ ತೆರಳಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
ಅಷ್ಟರಲ್ಲಿ ಪೊಲೀಸರಿಗೆ ಕಡೋಲಿಗೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಯವರ ಆದೇಶದ ಮೇರೆಗೆ ಕಡೋಲಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಕ್ಕೆ ಆಪ್ತ ಸಹಾಯಕ ಮಲಗೌಡ ಪಾಟೀಲ ಅವರು ಮುಖಂಡರೊಂದಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರ ಉಪಾಧ್ಯಕ್ಷ ಹಾಗೂ ಸದಸ್ಯರೊಂದಿಗೆ ಭೇಟಿ ಮಾಡಿ ಸಮಸ್ಯೆ ಕುರಿತು ಚರ್ಚಿಸಲಾಯಿತು. ಬಳಿಕ ಆಸ್ಪತ್ರೆ ಗೆ ಭೇಟಿ ನೀಡಿ ನೊಂದ್ ಕುಟುಂಬಕ್ಕೆ ಧೈರ್ಯ ತುಂಬಿ ಆರೋಗ್ಯ ವಿಚಾರಿಸಿ , ತಪ್ಪಿತಸ್ಥರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ತೆಗೆದು ಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸಚಿವರ ಪರವಾಗಿ ತಿಳಿಸಿದರು.**************************






