ಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಂಡಿಕೊಪ್ಪ ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಲಕ್ಷ್ಮೇಶ್ವರ : ಸಮೀಪದ ಕೊಂಡಿಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ವೀಡನ್ ದೇಶದ “ಮೋಡಿ ಎಂಜರ್ ಮಿಷನ್” ಅವರು ವೈಯಕ್ತಿಕವಾಗಿ ಉಚಿತ ಕಲಿಕಾ ಸಾಮಗ್ರಿ ವಿತರಿಸಿದ್ದಾರೆ.

ಅಕ್ಕಿಗುಂದದ ಫಕೀರೇಶ ಪೂಜಾರ ಮಾತನಾಡಿ ಕೊಂಡಿಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಶಾಲಾ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ನೋಟ್ ಪುಸ್ತಕ ಹಾಗೂ ಶಾಲಾ ಬ್ಯಾಗ್ ಲೇಖನಿ ಸಾಮಗ್ರಿಗಳನ್ನು ಸ್ವೀಡನ್ ದೇಶದ ಮೋಡಿ ಎಂಜರ್ ಮಿಷನ್ ರವರು ಸಿರಿವಂತರ ನಡುವೆಯೂ ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಕಳೆದ 10 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಾಗ್ರಿ ವಿತರಿಸುತ್ತಿರುವುದು.

ಶ್ಲಾಘನೀಯ ಅವರು ತಮ್ಮ ವೈಯಕ್ತಿಕವಾಗಿ ಪ್ರತಿ ವರ್ಷ ತಾಲ್ಲೂಕಿನ ವಿವಿಧ ಶಾಲೆಗಳಿಗೆ ನೀಡುತ್ತಾ ಬಂದಿದ್ದು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸರ್ಕಾರ ನೀಡುವ ಸವಲತ್ತುಗಳು ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಬಳಸಿಕೊಂಡು ಶಾಲೆಗಳಲ್ಲಿ ಶಿಕ್ಷಕರು ಮಾಡುವ ಪಾಠ ಪ್ರವಚನಗಳನ್ನು ಕೇಳಿ ಪಠ್ಯ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಹಾಗೂ ಇದನ್ನು ಮಕ್ಕಳು ಸದುಪಯೋಗ ಪಡಿಸಿಕೊಂಡು ಚೆನ್ನಾಗಿ ಅಭ್ಯಾಸ ಮಾಡಿ ಶಾಲೆಗೆ ಮತ್ತು ಪಾಲಕರಿಗೆ ಹೆಮ್ಮೆ ತರಬೇಕು ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಹಾಗೂ ಇತರೆ ಯಾವುದೇ ರೀತಿಯ ಅನಾನುಕೂಲ ಇದ್ದಲ್ಲಿ ಪೋಷಕರು ಶಿಕ್ಷಕರು ಸ್ವೀಡನ್ ದೇಶದ ಮೋಡಿ ಎಂಜರ್ ಮಿಷನ್ ಅವರ ಗಮನಕ್ಕೆ ತರುವಂತೆ ಸಲಹೆ ನೀಡಿದರು.

ಬಸವರಾಜ ದೊಡ್ಡಮನಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಮಾಡುತ್ತಿರುವವರು ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅವರು ದುಡಿದ ಹಣದಲ್ಲಿ ಸ್ವಲ್ಪ ಭಾಗವನಾದರೂ ವಿನಿಯೋಗ ಮಾಡುವಂತೆ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು ಸರ್ಕಾರ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲು ಲಕ್ಷಾಂತರ ರೂಗಳು ಖರ್ಚು ಮಾಡುತ್ತಿದೆ ಪ್ರತಿಯೊಬ್ಬ ಪೋಷಕರು ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದರ ಮೂಲಕ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಹೊಂದಲು ಸಹಕರಿಸುವಂತೆ ಹೇಳಿದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರಧಾನ ಗುರುಗಳಾದ ಎಮ್ ಎಸ್ ಹಿರೇಮಠ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಮೋಡಿ ಎಂಜರಮೇಷಿನ್ ಯವರ ಕೊಡುಗೆ ಅನನ್ಯವಾದುದೆಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷರಾದ ದೇವಪ್ಪ ಲಮಾಣಿ, ಬಸವರಾಜ ದೊಡ್ಡಮನಿ, ಗ್ರಾಪಂ ಉಪಾಧ್ಯಕ್ಷೆ ಕಾಶವ್ವ ದೊಡ್ಡಮನಿ, ರಾಮಣ್ಣ ಬಾಣದ ಮುಖ್ಯ ಶಿಕ್ಷಕ ಎಂ ಎಸ್ ಹಿರೇಮಠ, ಶಿಕ್ಷಕ ಎನ್ ಎಫ್ ಸಜ್ಜನರ, ಶಾಲೆಯ ಹಳೆಯ ವಿದ್ಯಾರ್ಥಿ ಸೈನಿಕ ನಾಗರಾಜ ಲಮಾಣಿ,ಅಂಗನವಾಡಿ ಕಾರ್ಯಕರ್ತೆ ರತ್ನ ದೊಡ್ಡಮನಿ,ಈರಪ್ಪ ತೆಗ್ಗಳ್ಳಿ, ಸುರೇಶ್ ಭಜಂತ್ರಿ,ಬಸವರಾಜ ದೊಡ್ಡಮನಿ, ನಾಗರಾಜ ವಾಲಿಕಾರ,ಶಂಕ್ರಪ್ಪ ಯಡಸಾಲಿ, ಅಕ್ಕಮ್ಮ ನೀರಲಗಿ, ಕಲ್ಮೇಶ್ ದೊಡ್ಡಮನಿ ಸೇರಿದಂತೆ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.**************************

Back to top button