ಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯರಾಜ್ಯ

ಬೆಳಗಾವಿ ವ್ಯಾಪ್ತಿಯಲ್ಲಿ 145 ಕಿಮೀ ಉದ್ದದ ಮಾನವ ಸರಪಳಿ: ಸತೀಶ್ ಜಾರಕಿಹೊಳಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಸೆಪ್ಟಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜ‌ನಗರದ ವರೆಗೆ ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡಿರುವ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿಯಿಂದ ಕಿತ್ತೂರಿನ ತೇಗೂರು ಗ್ರಾಮದ ವರಗೆ ಅಂದಾಜು 145 ಕಿ.ಮಿ ಉದ್ಧದ ಮಾನವ ಸರಪಳಿ ನಿರ್ಮಿಸಲಾಗಿತ್ತು.

ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿಯವರು ಚಾಲನೆ ನೀಡಿದರು. ಸಂವಿಧಾನ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಮಾನವ ಸರಪಳಿಯನ್ನು ನಿರ್ಮಿಸುವಲ್ಲಿ ಪಾಲ್ಗೊಂಡಿದ್ದರು. ಸಂವಿಧಾನ‌ ಪಿಠೀಕೆಯನ್ನು ಸಾಮೂಹಿಕವಾಗಿ ವಾಚಿಸಲಾಯಿತು. ಇಂದು ಕರ್ನಾಟಕದಲ್ಲಿ ಒಟ್ಟು 2500 ಕಿಲೋ ಮೀಟರ್ ಉದ್ದದ ಮಾನವ ಸರಪಳಿ ನಿರ್ಮಿಸಲಾಯಿತು.

ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಇದೇ ವೇಳೆ ಮಾತನಾಡಿದ ಸತೀಶ್ ಜಾರಕಿಹೊಳಿಯವರು, ವಿವಿಧತೆಯಲ್ಲಿ ಏಕತೆ ಹೊಂದಿರುವ ಹೆಮ್ಮೆಯ ಭಾರತದ ರಾಷ್ಟ್ರದಲ್ಲಿ ವೈವಿಧ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತದ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದರು.

ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ‌ ಶಕ್ತಿಯಾಗಿದೆ. ಭಾರತ ದೇಶವು ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ದೇಶದಲ್ಲಿ ಪರಿಣಾಮಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲ ಸಂವಿಧಾನ ಎಂದು ತಿಳಿಸಿದರು.

2007ರಲ್ಲಿ ವಿಶ್ವಸಂಸ್ಥೆಯಿಂದ ಘೋಷಣೆ

2007ರಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ 15ರ ದಿನವನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವೆಂದು ಘೋಷಣೆ ಮಾಡಲಾಯಿತು. ಪ್ರಪಂಚದಾದ್ಯಂತ ಪ್ರಜಾಪ್ರಭಯತ್ವದ ಮೌಲ್ಯಗಳು, ಆದರ್ಶಗಳು, ತತ್ವಗಳು ಮತ್ತು ಅದರ ಅನ್ವಯಿಕತೆ ಒಳಗೊಂಡ ಬೃಹತ್ ನಿರ್ಣಯ ಹೊರಡಿಸಿದ ಐತಿಹಾಸಿಕ ದಿನ ಇದಾಗಿದೆ.

ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಹಾಗೂ ಸಾರ್ವತ್ರಿಕ ಮೌಲ್ಯ, ಪ್ರಜಾಪ್ರಭುತ್ವ ರಕ್ಷಣೆ, ಮೌಲ್ಯಗಳನ್ನು ಉತ್ತೇಜಿಸಿವುದು ಹಾಗೂ ಪ್ರಜಾಪ್ರಭುತ್ವ ಅಲ್ಲದ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆ ಅಳವಡಿಸಿಕೊಳ್ಳಲು ಬೆಂಬಲಿಸುವುದು ಕಾರ್ಯಕ್ರಮದ ದು ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಈ ವೇಳೆ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು‌ ಮಾತನಾಡಿ, ಮಾನವಿಯತೆಯ‌ ಮೌಲ್ಯಗಳ ಸಂದೇಶ ಸಾರುವ ಈ ವಿಶ್ವ ದಾಖಲೆಯ ಕಾರ್ಯಕ್ರಮವು ಅಭೂತಪೂರ್ವವಾಗಿದೆ. ಇಡೀ ವಿಶ್ವವವೇ ನಮ್ಮ ರಾಜ್ಯದ ತಿರುಗಿ ನೀಡುವಂತಹ ಕಾರ್ಯಕ್ರಮ ಇದಾಗಿದೆ.

ಸರ್ಕಾರ ಯಾವುದೇ ಕಾರ್ಯಕ್ರಮ‌ ಯಶಸ್ವಿಯಾಗಬೇಕಾದರೆ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ ಎಂದು ಹೊಗಳಿದರು.*****************************

Back to top button