ಸಾರ್ವಜನಿಕರಿಗೆ ತೊಂದರೆ ಆಗುವ ಮೊದಲೇ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಲಿ..!!
ಸಮುದಾಯ ಆರೋಗ್ಯ ಅಧಿಕಾರಿಗಳ ಬೇಡಿಕೆಗಾಗಿ ಮನವಿ..
ಬೇಡಿಕೆ ಈಡೇರಿಕೆಗೆ 15ನೇ ತಾರಿಕಿನವರೆಗೆ ಗಡುವು…
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ವಿವಿಧ ಬೇಡಿಕೆಗಳು ಈಡೇರಿಸಲುವಂತೆ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ NHM ಗುತ್ತಿಗೆ ನೌಕರರ ಸಂಘದ ವತಿಯಿಂದ ಪೆ.15 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ನಿರ್ದರಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಶರಣಬಸಪ್ಪ ಕೋಳಿ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಗ್ರಾಮೀಣ ಭಾಗದಲ್ಲಿ ಇರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಳೆದ 7 ವರ್ಷಗಳಿಂದ ಕಾರ್ಯನಿರ್ವಹಿಸುತಿದ್ದಾರೆ.
ಆರೋಗ್ಯ ಇಲಾಖೆಯ ಸಂಬಂಧಪಟ್ಟ ಕಾರ್ಯಕ್ರಮದ ಹಾಗೂ ರಾಷ್ಟ್ರೀಯಾ ಆರೋಗ್ಯ ಅಭಿಯಾನ ನಿರ್ದೇಶಕರವರಿಗೆ ಮತ್ತು ಆರೋಗ್ಯ ಸಚಿವರಿಗೆ ಹಲವು ಬಾರಿ ನೌಕರರ ಬೇಡಿಕೆಗಳು ಮತ್ತು ಕುಂದು ಕೊರತೆಗಳ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪರಿಹಾರ ದೊರಕಿರುವುದಿಲ್ಲ.
ಆದ ಕಾರಣ ಇದೇ ತಿಂಗಳು 15ನೇ ತಾರೀಖಿನ ಒಳಗೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂಬ ಮಾಹಿತಿ ನೀಡಿದ್ದಾರೆ..
ನಮ್ಮ ಬೇಡಿಕೆಗಳು.
CPHC-UHC ಮಾರ್ಗಸೂಚಿಗಳ ಅನ್ವಯ 6 ವರ್ಷಸೇವೆ ಪೂರೈಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಸೇವೆಯನ್ನು ಜಾಯಂಗೊಳಿಸಬೇಕು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಇತರೆ ನೌಕರರಿಗೆ ನೀಡಿದ 15% ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡ ಅನ್ವಯಿಸಬೇಕು, ತಡೆಹಿಡಿದಿರುವ 5% ವಾರ್ಷಿಕ ವೇತನ ಮತ್ತು 10% loyality Bonus ಕೂಡಲೆ ಬಿಡುಗಡೆ ಮಾಡಬೇಕು,
ವಿನಾಕಾರಣ ವಜಾಗೊಳಿಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡಲೇ ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು , CPHC-UHC ಮಾರ್ಗ ಸೂಚಿಗಳ ಅನ್ವಯ ಮಾಸಿಕ ಪ್ರೋತ್ಸಾಹಧನ 15000 ಗಳನ್ನು ಪಾವತಿಸಬೇಕು,
ಸಮುದಾಯ ಆರೋಗ್ಯ ಅಧಿಕಾರಿಗಳ ಕುಟುಂಬಕ್ಕೆ ಆರೋಗ್ಯ ವಿಮೆ ಹಾಗೂ PF ಒದಗಿಸಬೇಕು ಸೇರಿದಂತೆ 11 ಬೇಡಿಕೆಗಳನ್ನು ಈಡರಿಸಬೇಕೆಂದು ಜಿಲ್ಲಾಧ್ಯಕ್ಷ ಶರಣಬಸಪ್ಪ ಕೋಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಎನ್ ಕನ್ನೂರ, ಜಿಲ್ಲಾ ಖಜಾಂಚಿ ಸಂಗಮೇಶ್ ಬಂಡ್ರೊಳಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಕ್ರಿ, ರಾಜ್ಯ ಸಹ ಕಾರ್ಯದರ್ಶಿ ಅಮೃತ ಮಜ್ಜಿಗಿ, ಜಿಲ್ಲಾ ಕಾರ್ಯದರ್ಶಿ ಶಿವಶಂಕರ ಭೂಷಣವರ, ಯಲ್ಲಪ್ಪ ಕಾತ್ರಾಳ, ಇನ್ನಿತರ ಉಪಸ್ಥಿತರಿದ್ದರು.*********************************