ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ನಿಂದನೆ ಮಾಡಿದ ಆರೋಪಿ ಬಂಧನ…!!

ಸಮಾಜಿಕ ಜಾಲತಾಣದಲ್ಲಿ ನಿಂದನೆ ಹಿನ್ನೆಲೆ ಕೇಸ್.
ಆರೋಪಿಯನ್ನು ಬಂಧಿಸಿದ ಬೆಳಗಾವಿ ಮಾರ್ಕೆಟ್ ಪೊಲೀಸರು…
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಸೋಷಿಯಲ್ ಮೀಡಿಯಾದಲ್ಲಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಕುರಿತು ಈ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಪರಿಶಿಷ್ಟ ಪರ್ಗಗಳ ದೌರ್ಜನ್ಯ ಸಮತಿಯ ಸದಸ್ಯ ವಿಜಯ (ಯಲ್ಲಪ್ಪ) ಬಸಪ್ಪ ತಳವಾರ ಎಂಬುವರು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಸಚಿವರಿಗೆ ನಿಂದನೆ ಮಾಡಿದ ವ್ಯಕ್ತಿಯ ಜಾಡು ಬಿನ್ನಟ್ಟಿದ ಪೊಲೀಸರು ಇಂದು ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ ಎಂಬುವರನ್ನು ಬಂಧಿಸಿ ಬೆಳಗಾವಿ ಕೋರ್ಟ್ ಗೆ ಕರೆತಂದು ಹಾಜರುಪಡಿಸಿದ್ದಾರೆ.***********************






