ಏ. 27 ರಂದು ವಸತಿ ಶಾಲೆಗಳ 6ನೇ ತರಗತಿ ಪರೀಕ್ಷೆ: ಪ್ರವೇಶ ಪತ್ರ ಪಡೆಯಲು ಸೂಚನೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಕೊಪ್ಪಳ ಏಪ್ರಿಲ್ 23 : ಕೊಪ್ಪಳ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶ ಪರೀಕ್ಷೆ ಏ. 27 ರಂದು ನಡೆಯಲಿದ್ದು, ಪ್ರವೇಶ ಪತ್ರ ಪಡೆದುಕೊಳ್ಳುವಂತೆ ಇಲಾಖಾ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ ತಿಳಿಸಿದ್ದಾರೆ.
ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶ ಪರೀಕ್ಷೆಯನ್ನು ಏ. 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿಪಡಿಸಲಾಗಿದೆ. ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ https://domgok.in/Admission/StudentHallticket ಆನ್‌ಲೈನ್ ನಲ್ಲಿಯೇ ಪ್ರವೇಶ ಪತ್ರ ಪಡೆದು, ಅದರಲ್ಲಿ ತಿಳಿಸಿರುವ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ 08539-225070, ಮೊ.ಸಂ: 8088892549 ಕ್ಕೆ ಅಥವಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಾದ ಯಲಬುರ್ಗಾ ಮೊ.ಸಂ: 9620522537, ಗಂಗಾವತಿ ಮೊ.ಸಂ: 9972524670, ಕುಷ್ಟಗಿ ಮೊ.ಸಂ: 8861610578 ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.******************************