ಪ್ರಕೃತಿ ಬೆಳಗಾವಿ
ರೂಪಾ ಚನ್ನಗೌಡ ಪಾಟೀಲ್ ಗೆ ಸತೀಶ್ ಜಾರಕಿಹೊಳಿ ಅಭಿಮಾನಿಗಳಿಂದ ಸತ್ಕಾರ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿ ರೂಪಾ ಚನ್ನಗೌಡ ಪಾಟೀಲ SSLC ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜಕ್ಕೆ ಮೊದಲ ಸ್ಥಾನ ಪಡೆದಿದ್ದರಿಂದ ಸತೀಶ್ ಜಾರಕಿಹೊಳಿ ಅಭಿಮಾನಿಗಳಿಂದ ಸತ್ಕರಿಸಲಾಯಿತು.
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೇವಲಾಪುರ ಗ್ರಾಮದ ರೂಪಾ ಚನ್ನಗೌಡ ಪಾಟೀಲನವರ ಮನೆಗೆ ಭೇಟಿ ನೀಡಿ ವಿದ್ಯಾರ್ಥಿನಿಗೆ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಂಕಾ ಜಾರಕಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ ಇರುವ ಭಾವಚಿತ್ರವನ್ನು ನೀಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರೇಬಾಗೇವಾಡಿ ಎಸ್ಟಿ ಬ್ಲಾಕ್ ಅಧ್ಯಕ್ಷ ಪರಶುರಾಮ್ ಪೂಜಾರಿ, ಯಲ್ಲಪ್ಪ ಹಿತ್ತಲಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.*************************