ಬಜೆಟ್ ನಾಡಿನ ಹಿತ ಕಾಯುವಲ್ಲಿ ಯಶಸ್ವಿ-ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೆಚ್ಚುಗೆ…!!
ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ವಿಶೇಷ ಒತ್ತು…
ಪ್ರಕೃತಿ ಬೆಳಗಾವಿ ಸುದ್ದಿ : ಬೆಂಗಳೂರು : ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದಾಮಯ್ಯನವರು ಮಂಡಿಸಿದ 2024-5-25ನೇ ಸಾಲಿನ ಬಜೆಟ್ ನಾಡಿನ ಹಿತ ಕಾಯುವಲ್ಲಿ ಯಶಸ್ವಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಯವರು ರಾಜ್ಯದ ಪರವಾಗಿ ಮಂಡಿಸಿದ ಬಜೆಟ್ ಸ್ವಾಗತಾರ್ಹ. ರೈತರ, ಹಿಂದುಳಿದವರ, ಮಹಿಳೆಯರ ಪರವಾಗಿ ಅನೇಕ ಜನಪರ ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದ್ಧಾರೆ. ಇದೊಂದು ಮಾದರಿ ಬಜೆಟ್ ಎಂದು ಹೇಳಿದರು.
ಬಜೆಟ್ ನಲ್ಲಿ ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ಇಲಾಖೆಯ ಕಾರ್ಯಕ್ರಮ, ಇನ್ನಿತರ ಜನಸ್ನೇಹಿ ಯೋಜನೆಗಳಿಗೆ 86 ಸಾವಿರದ 423 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ 54 ಸಾವಿರದ 617 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹೊಸದಾಗಿ 1 ಸಾವಿರ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸುವ ತೀಮಾರ್ನಿಸಿರುವುದು ಸ್ವಾಗತಾರ್ಹ ಎಂದು ಚನ್ನರಾಜ ಹಟ್ಟಿಹೊಳಿ ಅವರು ಹೇಳಿದರು.**************************