ಪ್ರಕೃತಿ ಬೆಳಗಾವಿ

*ದಂಪತಿಗಳ ಆತ್ಮಹತ್ಯೆ; ಅಚ್ಚರಿಯ ರೀತಿಯಲ್ಲಿ ಬಚಾವಾದ ಎರಡು ವರ್ಷದ ಮಗು*

ಪ್ರಕೃತಿ ಬೆಳಗಾವಿ ಸುದ್ದಿ : ಪಟ್ಟಣದ ಜಯನಗರ ಬಡಾವಣೆಯಲ್ಲಿ ದಂಪತಿಗಳಿಬ್ಬರು ಒಂದೇ ಕುಣಿಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜರುಗಿದೆ,

ಮೃತರನ್ನು ಹೊಸಕೋಟೆ ಗ್ರಾಮದ ಗಣೇಶಗೌಡ ಮತ್ತು ಮಂಜುಳಾ ದಂಪತಿಯ ಪುತ್ರ ದರ್ಶನ್ (29) ಹಾಗೂ ಅವರ ಪತ್ನಿ ಎನ್.ಎಲ್. ದಿವ್ಯ (25) ಎಂದು ಗುರುತಿಸಲಾಗಿದೆ,

ಘಟನೆಯ ವಿವರ : ಪಟ್ಟಣದ ಜಯನಗರ ಬಡಾವಣೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದ ಹಿಂಭಾಗದಲ್ಲಿ ಈ ಘಟನೆ ಸಂಭವಿಸಿದೆ. ನಾಟನಹಳ್ಳಿ ಗ್ರಾಮದ ಲಕ್ಷ್ಮಣಗೌಡ ಮತ್ತು ಸುನಂದಾ ದಂಪತಿಯ ಪುತ್ರಿ ದಿವ್ಯ ಅವರನ್ನು ಮೂರು ವರ್ಷಗಳ ಹಿಂದೆ ದರ್ಶನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಎರಡು ವರ್ಷದ ಹೆಣ್ಣು ಮಗುವಿದೆ,

ಮಗು ಪವಾಡಸದೃಶ ಪಾರು : ದರ್ಶನ್ ಮತ್ತು ದಿವ್ಯ ದಂಪತಿಗಳು ಮಗುವಿನೊಂದಿಗೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು ಎನ್ನಲಾಗಿದೆ, ಆದರೆ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಪೋಷಕರಿಬ್ಬರು ಸಾವನ್ನಪ್ಪಿದ್ದಾರೆ. ಅತ್ಯಂತ ಅನ್ಯೋನ್ಯವಾಗಿದ್ದ ಈ ದಂಪತಿಗಳ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ,

ಪೊಲೀಸ್ ಭೇಟಿ ಮತ್ತು ತನಿಖೆ: ಘಟನೆಗೆ ಸಂಬಂಧಿಸಿದಂತೆ ಮೃತ ದರ್ಶನ್ ಅವರ ತಂದೆ ಗಣೇಶಗೌಡ ಅವರು ಕೃಷ್ಣರಾಜಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಕೃಷ್ಣರಾಜಪೇಟೆ ಟೌನ್ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.***************************

Leave a Reply

Your email address will not be published. Required fields are marked *

Back to top button