*ಮಂಡ್ಯ ಜಿಲ್ಲಾ ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಖ್ಯಾತ ವಕೀಲ ವಿ.ಎಸ್. ಧನಂಜಯ್ ಕುಮಾರ್ ನೇಮಕ*

ಪ್ರಕೃತಿ ಬೆಳಗಾವಿ ಸುದ್ದಿ : ಕೃಷ್ಣರಾಜಪೇಟೆ ವರದಿ : ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ತಾಲ್ಲೂಕಿನ ಜೆಡಿಎಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಹಾಗೂ ಖ್ಯಾತ ವಕೀಲರಾದ ವಿ.ಎಸ್. ಧನಂಜಯ್ ಕುಮಾರ್ ಅವರನ್ನು ನೇಮಕ ಮಾಡಿ ಪಕ್ಷದ ವರಿಷ್ಠರು ಆದೇಶ ಹೊರಡಿಸಿದ್ದಾರೆ.
ಜೆಡಿಎಸ್ ಪಕ್ಷದ ಬಲವರ್ಧನೆ ಮತ್ತು ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಖ್ಯಾತ ವಕೀಲ ಧನಂಜಯ್ ಕುಮಾರ್ ಅವರ ಸೇವೆಯನ್ನು ಗುರುತಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ.
ನಂತರ ಮಾತನಾಡಿದ ಖ್ಯಾತ ವಕೀಲ ಧನಂಜಯ್ ಕುಮಾರ್ ಅವರು ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ನಂಬಿ ಕೆಲಸ ಮಾಡುತ್ತಿರುವ ನನ್ನನ್ನು ಗುರುತಿಸಿ ಈ ಜವಾಬ್ದಾರಿ ನೀಡಿರುವುದು ಸಂತಸ ತಂದಿದೆ. ನನ್ನ ಈ ಆಯ್ಕೆಗೆ ಸಹಕರಿಸಿದ ಕೃಷ್ಣರಾಜಪೇಟೆ ಕ್ಷೇತ್ರದ ಜನಪ್ರಿಯ ಶಾಸಕರಾದ ಹೆಚ್.ಟಿ. ಮಂಜು ಅವರಿಗೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.
ಮುಂದುವರಿದು ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರಿಗೆ ಖ್ಯಾತ ವಕೀಲ ಧನಂಜಯ್ ಕುಮಾರ್ ಅವರು ಧನ್ಯವಾದಗಳನ್ನು ಅರ್ಪಿಸಿದರು.
ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಶ್ರಮಿಸುವುದರ ಜೊತೆಗೆ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಧನಂಜಯ್ ಕುಮಾರ್ ಅವರ ನೇಮಕಕ್ಕೆ ತಾಲೂಕಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.*********************************






