ಪ್ರಕೃತಿ ಬೆಳಗಾವಿ
ಬೆಳಗಾವಿ ಮೇಯರ್ ಆಗಿ ಮಂಗೇಶ ಪವಾರ್ ಉಪಮೇಯರ್ ಆಗಿ ವಾಣಿ ಜೋಶಿ ಆಯ್ಕೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿಗೆ ಒಲಿದಿದ್ದು ಪಾಲಿಕೆ ಸದಸ್ಯ ಮಂಗೇಶ ಪವಾರ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ವಾಣಿ ಜೋಶಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಬಸವರಾಜ ಮೊದಗೇಕರ್ ಗೆ ತೀವ್ರ ಹಿನ್ನಡೆಯಾಗಿದೆ.
ಬಿಜೆಪಿ ಈ ಬಾರಿ ಕನ್ನಡ ಹಾಗೂ ಮರಾಠ ಸಮುದಾಯಗಳನ್ನು ಓಲೈಕೆ ಮಾಡಿದೆ. ಮೇಯರ್ ಆಗಿ ಆಯ್ಕೆಯಾಗಿರುವ ಮಂಗೇಶ ಪವಾರ 40 ಮತಗಳನ್ನು ಪಡೆದು ವಿಜೇತರಾಗಿದ್ದಾರೆ. ಪ್ರತಿಸ್ಪರ್ಧಿ ಬಸವರಾಜ ಮೊದಗೇಕರ್ 20 ಮತಗಳನ್ನು ಪಡೆದಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಆಯ್ಕೆಯಾದ ವಾಣಿ ಜೋಶಿ ಅವರು 40 ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಲಕ್ಷ್ಮೀ ಲೋಕರಿ 20 ಮತಗಳನ್ನು ಪಡೆದರು.****************************