ಪ್ರಕೃತಿ ಬೆಳಗಾವಿ

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆ ಮೇಲೆ ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್…!!

7 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು…

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಾಘವಾಡೆ ಗ್ರಾಮದಿಂದ ಮಾರ್ಕಂಡೇಯ ನಗರದ ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಸುಮಾರು 4 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯಲಿದೆ. ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಗಮನ ಹರಿಸಿ, ಹಲವಾರು ಯೋಜನೆಗಳ ಮೂಲಕ ಹಣ ಮಂಜೂರು ಮಾಡಿಸಿ, ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುತ್ತಿದೆ. 7 ವರ್ಷದ ಹಿಂದೆ ಕ್ಷೇತ್ರ ಹೇಗಿತ್ತು, ಈಗ ಹೇಗಿದೆ ಎನ್ನುವುದು ನಿಮಗೆಲ್ಲ ಗೊತ್ತಿದೆ. ನಮ್ಮೆಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಈ ವೇಳೆ ವೈಶಾಲಿ ಕಾಂಬಳೆ, ಸುನಿಲ ಪಾಟೀಲ, ನಾಗೇಂದ್ರ ಪಾಟೀಲ, ಮಾರುತಿ ದೇಸಾಯಿ, ಪ್ರಮೋದ್ ಲೋಹಾರ್, ಶುಭಂ ಲೋಕಾರ್, ವಿನಾಯಕ ಗುರವ, ಕಲ್ಲಪ್ಪ ಹುಂದ್ರೆ, ಬಾವಕಣ್ಣ ಪಾಟೀಲ, ಸಂತೋಷ ಅಂಬೋಳ್ಕರ್ ಮುಂತಾದವರು ಉಪಸ್ಥಿತರಿದ್ದರು.

ನಂತರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿಬಸ್ತವಾಡ, ವಾಘವಾಡೆ ಗ್ರಾಮಗಳ ಮುಖ್ಯ ರಸ್ತೆಯಿಂದ ಕಾಳೆನಟ್ಟಿ ಗ್ರಾಮದವರೆಗಿನ ರಸ್ತೆ ಸುಧಾರಣೆಯ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಇಂದು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದೆ.

ಈ ವೇಳೆ ನಿಂಗಪ್ಪ ತಲ್ಲೂರಿ, ಬಾಳೇಶ್ ನಾಯ್ಕ್, ಮಂಗೇಶ್ ನಾಯ್ಕ್, ದೀಪಕ್ ಕಲ್ಲೂರಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜೆ.ಬಿ.ಬಾಗೋಜಿಕೊಪ್ಪ, ಆಪ್ತ ಸಹಾಯಕ ಸಾತೇರಿ ಕೋಕಿತಕರ್, ಸಾಗರ ತಹಶಿಲ್ದಾರ, ಗುತ್ತಿಗೆದಾರರಾದ ದಂಡಿನ್ ಮುಂತಾದವರು ಉಪಸ್ಥಿತರಿದ್ದರು.

ಇದರ ನಂತರ, ಕ್ಷೇತ್ರದ ಮಾರ್ಕಂಡೇಯ ನಗರದ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ನಡೆಯಲಿದೆ. ನಿಗದಿತ ಸಮಯದಲ್ಲಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಈ ವೇಳೆ ವೈಶಾಲಿ ಕಾಂಬಳೆ, ಬಸು ಗುಂಡ್ಯಾಗೋಳ, ಸುರೇಶ ಗಾವನ್ನವರ, ಸಿದ್ದರಾಯಿ ನಾಯ್ಕ್, ಬಸಪ್ಪ ಡಿ, ಲಕ್ಷ್ಮಣ ಎಮ್, ಬಸು ನಾಯ್ಕ್, ಹೊಳೆಪ್ಪ ಸುಳದಾಳ, ಸಿದ್ದರಾಯಿ ವಡ್ರಗೋಳ ಮುಂತಾದವರು ಉಪಸ್ಥಿತರಿದ್ದರು.*************************

Leave a Reply

Your email address will not be published. Required fields are marked *

Back to top button