ಪ್ರಕೃತಿ ಬೆಳಗಾವಿ
ರಸ್ತೆ ಕಾಮಗಾರಿಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಚಾಲನೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗ್ರಾಮಸ್ಥರ ಸಮ್ಮುಖದಲ್ಲಿ ಸೋಮವಾರ ಚಾಲನೆ ನೀಡಿದರು.
ಶಾಸಕರ ಅನುದಾನದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಅನುದಾನ ನೀಡಲಾಗಿದ್ದು, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಉಪಸ್ಥಿತರಿದ್ದರು.*************************