ಪ್ರಕೃತಿ ಬೆಳಗಾವಿ

ಪೈಪ್‌ಲೈನ್ ಕಾಮಗಾರಿ ವೇಳೆ ಇಬ್ಬರು ಕಾರ್ಮಿಕರು ಸಾವು ಕ್ರಮಕ್ಕೆ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದ ಒಳಚರಂಡಿ ಪೈಪ್‌ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಕುರಿತು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಕುರಿತು ಪ್ರಕಟಣೆ ಹೊರಡಿಸಿ, ಸಂತಾಪ ಸೂಚಿಸಿರುವ ಅವರು, ಒಳಚರಂಡಿ ಪೈಪ್‌ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ ಹೊಂದಿದ್ದು, ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ಕೂಡಲೇ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ತಿಳಿಸಿದ್ದಾರೆ.

ಇನ್ನು ಮೃತ ಕಾರ್ಮಿಕರ ಕುಟುಂಬಗಳಿಗೆ ಮಹಾನಗರ ಪಾಲಿಕೆ, ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಮೂಲಕ ಭರವಸೆ ನೀಡಿದ್ದಾರೆ.****************************

Leave a Reply

Your email address will not be published. Required fields are marked *

Back to top button