ಪ್ರಕೃತಿ ಬೆಳಗಾವಿ
ಸಚಿವರಿಗೆ ಜಾತ್ರೆಗೆ ಆಮಂತ್ರಣ ನೀಡಿದ ಪಂಚಕಮಿಟಿ ಪ್ರಮುಖರು…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ, ಶ್ರೀ ದುರ್ಗಾ ಹಾಗೂ ಶ್ರೀ ಮಸಣಾಯಿ ದೇವಿಯರ ಜಾತ್ರಾ ಮಹೋತ್ಸವದ ಅಂಗವಾಗಿ, ಗ್ರಾಮದ ಪಂಚಕಮಿಟಿಯ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಶನಿವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ, ಜಾತ್ರೆಗೆ ಪ್ರೀತಿ-ಪೂರ್ವಕವಾಗಿ ಆಹ್ವಾನಿಸಿದರು.
ಈ ಧಾರ್ಮಿಕ ಉತ್ಸವವು ಯಶಸ್ವಿಯಾಗಿ, ಶಾಂತಿಯುತವಾಗಿ ನೆರವೇರಲಿ ಎಂದು ಆಶಿಸುತ್ತೇನೆ. ಜಾತ್ರೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದ್ದು, ಈಗಾಗಲೇ ಕಮಗಾರಿ ನಡೆಸಲಾಗಿದೆ. ಭಕ್ತಾಧಿಗಳಿಗೆ ಯಾವುದೇ ತೊಂದರೆಗಳಾಗದಂತೆ ಎಲ್ಲ ನಿಗಾ ವಹಿಸಲು ಸೂಚನೆ ನೀಡಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಗ್ರಾಮಸ್ಥರಿಗೆ ಅಭಯ ನೀಡಿದರು.
ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೂ ಆಹ್ವಾನ ಪತ್ರಿಕೆ ನೀಡಿದರು.***************************