ಪ್ರಕೃತಿ ಬೆಳಗಾವಿ
ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಶ್ರೀ ಬೀರದೇವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 7 ವರ್ಷಗಳಲ್ಲಿ ನೂರಾರು ಸಮುದಾಯ ಭವನ, ದೇವಸ್ಥಾನಗಳನ್ನು ನಿರ್ಮಾಣ ಮಾಡಲಾಗಿದೆ. ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆ ತರಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವರಾಜ ಕದಂ, ಬಾಲಕೃಷ್ಣ ತೇರಸೆ, ಮಥುರಾ ತೇರಸೆ, ನೀಲಕಂಠ ಕುರುಬರ, ನಾಣು ಗಡಕರಿ, ಪಿಡಿಓ ಅಧಿಕಾರಿ, ಶೆಗುಣಸಿ, ಲಕ್ಷ್ಮಣ ಕುರಬರ, ಸಂಜು ಶಿವಾಜಿ, ಭರ್ಮಾ ಶಹಾಪೂರಕರ್, ಲಕ್ಷ್ಮಣ ಚೌಗುಲೆ ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.*************************