ಬಡವರ ಅಭ್ಯುದಯಕ್ಕೆ ಜನಪರ ಕಾರ್ಯಕ್ರಮ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ…
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುವ ಮೂಲಕ ರೈತರ, ಮಹಿಳೆಯರ, ಬಡಜನರ ಸಬಲೀಕರಣಕ್ಕೆ ನಾಂದಿ ಹಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕೃಷಿ ಇಲಾಖೆ ವತಿಯಿಂದ ನಡೆದ ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಎಂದಿಗೂ ಜನರ ಪರ, ಬಡವರ ಪರ ಎಂದರು.
ರೈತರ ಕಷ್ಟಗಳಿಗೆ ಸದಾ ಸ್ಪಂದಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರೈತರಿಗೆ ಕೃಷಿ ಇಲಾಖೆಯ ಇತಿಹಾಸದಲ್ಲೆ ಮೊದಲ ಬಾರಿಗೆ ಬಹಳ ದೊಡ್ಡ ನ ಮೊತ್ತದ ಸಬ್ಸಿಡಿ ನೀಡಲಾಗಿದೆ. ಇದು ರೈತರ ಮೇಲೆ ಅವರಿಗಿರುವ ಕಾಳಜಿ ಎಂದು ಹೇಳಿದರು.
ರೈತರ ಏಳಿಗೆಗಾಗಿ ರಾಜ್ಯ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೇವಲ ರೈತರಿಗಷ್ಟೇ ಅಲ್ಲದೆ, ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರ ಸಬಲೀಕರಣಕ್ಕೂ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಭೈರತಿ ಸುರೇಶ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ಎನ್.ಎಚ್.ಕೋನರೆಡ್ಡಿ, ಮಾಜಿ ಶಾಸಕ ಶ್ಯಾಮ್ ಘಾಟಗೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮತ್ತಿತರರು ಉಪಸ್ಥಿತರಿದ್ದರು.*************************