ಪ್ರಕೃತಿ ಬೆಳಗಾವಿ
ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.
ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವ ಹಾಗೂ ಉಜ್ಜಯಿನಿ ಜಗದ್ಗುರು ಮಹಾಸನ್ನಿದಿಯವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ 1008 ಕುಂಭೋತ್ಸವ, ಪುರಾಣ ಪ್ರವಚನ ಧರ್ಮ ಸಮಾರಂಭದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.
ನಂತರ ಸಂತೋಷ್ ಜಾರಕಿಹೊಳಿ ಅವರ ಗ್ರಾಮ ದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪೂಜ್ಯರು, ಶ್ರೀಗಳು, ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು.*************************