ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ಜಿಲ್ಲೆಯ ಗೋಕಾಕ ತಾಲೂಕಿನ ಕಲ್ಲೋಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದರು.
ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕರಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ್, ಸಚಿವ ಸತೀಶ್ ಜಾರಕಿಹೊಳಿ ಅವರು ಈ ಭಾಗದ ಅಭಿವೃದ್ಧಿ ಹರಿಕಾರರಾಗಿದ್ದಾರೆ. ರೈತರ ಕಷ್ಟ, ಸಮಸ್ಯೆಗಳಿಗೆ ಕಾಳಜಿ ಪೂರ್ವಕವಾಗಿ ಸ್ಪಂದಿಸುತ್ತಿದ್ದು, ಅವರ ಸಮಾಜಮುಖಿ ಸೇವೆ ನಾವು ಋಣಿಯಾಗಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಕಲ್ಲೋಳಿಯಿಂದ ಕೆಲವು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕೆಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿಲಕಂಟ ಕಪ್ಪಲಗುದ್ದಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ್, ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ನಿಲಕಂಟ ಕಪ್ಪಲಗುದ್ದಿ, ಬಸು ದಾಸನವರ್, ಸುಭಾಷ ಕುರಬೇಟ, ಮಲ್ಲಪ್ಪಾ ಹೆಬ್ಬಾಳ, ಮಲ್ಲಪ್ಪಾ ಕಡಾಡಿ, ವಸಂತ ತಹಶೀಲ್ದಾರ್, ಮಹಾದೇವ ಮದಬಾವಿ, ಭಗವಂತ ಪತ್ತಾರ, ಈರಪ್ಪಾ ಹೆಬ್ಬಾಳ, ಕಲ್ಲಪ್ಪಾ ಲಕ್ಕಾರ್ ಸೇರಿದಂತೆ ಹಲವರು ಇದ್ದರು.*******************************