ಪ್ರಕೃತಿ ಬೆಳಗಾವಿ

ಹಠಾತ್‌ ಹೃದಯಾಘಾತ: ಕಾಮಿಡಿ ಕಿಲಾಡಿ -3 ಖ್ಯಾತಿಯ ರಾಕೇಶ್‌ ಪೂಜಾರಿ ನಿಧನ…!!

ಪ್ರಕೃತಿ ಬೆಳಗಾವಿ ಸುದ್ದಿ : ಉಡುಪಿ : ಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.

ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಸೋಮವಾರ ಬೆಳಗ್ಗಿನ ಜಾವ 3:30ರ ವೇಳೆಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ರಾತ್ರಿ ಅವರು ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.

ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂದು ತಿಳಿದುಬಂದಿದೆ.

ರಾಕೇಶ್, ಕೊನೆಯದಾಗಿ ದಸ್ತಕ್ ಸಿನಿಮಾದ ಪ್ರೀಮಿಯರ್ ಶೋ ನಲ್ಲಿ ಭಾಗಿಯಾಗಿದ್ರು. ಅಲ್ಲದೇ ಇತ್ತಿಚೆಗಷ್ಟೇ ಆಕ್ಸಿಡೆಂಟ್ ಆಗಿತ್ತು, ಹೆಲ್ತ್ ಇಶ್ಯೂ ಇರಲಿಲ್ಲ ಎಂದು ತಿಳಿದುಬಂದಿದೆ. ಸದ್ಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಕೇಶ್‌ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ ರಕ್ಷಿತಾ ಪ್ರೇಮ್ ಇನ್‌ಸ್ಟಾದಲ್ಲಿ ವಿಶೇಷ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಜನಪ್ರಿಯ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ರ ಗ್ರ್ಯಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿದ್ದ ಉಡುಪಿ ನಿವಾಸಿ ರಾಕೇಶ್,ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ. ರಾಕೇಶ್ ತಮ್ಮ ಶಾಲಾ ಶಿಕ್ಷಣವನ್ನ ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದರು.ಅಷ್ಟೇ ಅಲ್ಲ ಪೈಲ್ವಾನ್, ಇದು ಎಂತ ಲೋಕವಯ್ಯ ಕನ್ನಡ ಸಿನಿಮಾ, ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕ್ಕೆಲ್ ತುಳು ನಾಟಕಗಳು, ಪ್ರಹಸನಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.*****************************

Leave a Reply

Your email address will not be published. Required fields are marked *

Back to top button